ನ್ಯಾಯಾಲಯದ ತೀರ್ಪು ಹೊರಬರುತ್ತಿದ್ದಂತೆ ಕಣ್ಣೀರಿಟ್ಟ ನಿರ್ಭಯಾ ಹಂತಕರು

ಹೊಸದಿಲ್ಲಿ : (ಜ.09) ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ  ನಾಲ್ವರು ಆರೋಪಿಗಳಿಗೆ ದಿಲ್ಲಿ ನ್ಯಾಯಾಲಯ ಮಂಗಳವಾರ ಡೆತ್ ವಾರಂಟ್ ಹೊರಡಿಸಿದೆ. ನ್ಯಾಯಾಲಯದ ತೀರ್ಪು ಪ್ರಕಟವಾಗುತ್ತಿದ್ದಂತೆ  www.janathe.com ತಿಹಾರ್ ಜೈಲಿನಲ್ಲಿರುವ ಅಪರಾಧಿಗಳು ಕಣ್ಣೀರಿಟ್ಟಿದ್ದಾರೆ.
ಅಪರಾಧಿಗಳನ್ನು ಜನವರಿ 22 ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸಲು ನ್ಯಾಯಾಲಯ ಆದೇಶ ನೀಡಿದೆ.

Dealth penalty to nirbhaya rape accused
ಮಂಗಳವಾರ ಬೆಳಗ್ಗೆಯಿಂದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವೀಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಕರಣದ ವಿಚಾರಣೆ ನಡೆದಿತ್ತು. ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ www.janathe.com ಶಿಕ್ಷೆಗೊಳಗಾದ ನಾಲ್ವರು ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್ ಮತ್ತು ಮುಖೇಶ್ ಸಿಂಗ್  ಇವರಿಗೆ  ಮಧ್ಯಾಹ್ನ 3.30ಕ್ಕೆ  ಗಲ್ಲು ಶಿಕ್ಷೆಯ ತೀರ್ಪನ್ನು ಕಾಯ್ದಿರಿಸಲಾಗಿತ್ತು. ಬಳಿಕ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ಅರೋರಾ  ಡೆತ್ ವಾರಂಟ್ ಹೊರಡಿಸಿದರು.

Federal capital
ಈ  ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ  ಅಕ್ಷಯ್‌  2017ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ನಂತರ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ದೃಢಪಡಿಸಿತ್ತು. 2019 ಜುಲೈ 9 ರಂದು ಈ ಪ್ರಕರಣದಲ್ಲಿ ಇತರ ಮೂವರು ಅಪರಾಧಿಗಳಾದ ಮುಖೇಶ್ , ಪವನ್ ಗುಪ್ತಾ ಮತ್ತು ವಿನಯ್ ಶರ್ಮಾ  ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು  ಸುಪ್ರೀಂ ಕೋರ್ಟ್  ವಜಾಗೊಳಿಸಿತ್ತು.

Ashwini studio

www.janathe.com  ಸಾಕ್ಷಿ ವಿರುದ್ಧ ಎಫ್ ಐಆರ್ ದಾಖಲಿಸುವಂತೆ  ಸಲ್ಲಿಸಲಾದ ಅರ್ಜಿ ವಜಾ 2012 ರ ಪ್ರಕರಣದಲ್ಲಿ ಈ  ಭೀಕರ ಘಟನೆ ನಡೆದಾಗ 23 ವರ್ಷದ ಸಂತ್ರಸ್ತೆಯ ಸ್ನೇಹಿತ ಪ್ರತ್ಯಕ್ಷ ಸಾಕ್ಷಿಯಾಗಿದ್ದನು. ಅವನ ಮೇಲೂ ಹಲ್ಲೆ ನಡೆದಿತ್ತು. ಆತನ ವಿರುದ್ಧ ಎಫ್ ಐಆರ‍್ ದಾಖಲಿಸುವಂತೆ ಮರಣದಂಡನೆ ಶಿಕ್ಷೆಗೆ ಗುರಿಯಾದ ನಾಲ್ವರ ಪೈಕಿ ಒಬ್ಬನ  ತಂದೆ ಸಲ್ಲಿಸಿದ್ದ ಮನವಿಯನ್ನು ದಿಲ್ಲಿ ನ್ಯಾಯಾಲಯ ಸೋಮವಾರ ವಜಾಗೊಳಿಸಿತ್ತು.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!