ಬಿಎಸ್‌ವೈ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಕಲ್ಲಡ್ಕ ಪ್ರಭಾಕರ ಭಟ್

ಚಿಕ್ಕಬಳ್ಳಾಪುರ : (ಜ.19) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುತ್ತೇನೆ ಎಂದು ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

Kalladka prabhakar bhat

ನಗರದಲ್ಲಿ ಭಾನುವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ಮುಂದಿನ ಮೂರೂವರೆ ವರ್ಷ ಸರ್ಕಾರ ಸುಭದ್ರವಾಗಿ ನಡೆಯಲಿದೆ. ಯಾರೂ ತಲೆ ಬಿಸಿ ಮಾಡಿಕೊಳ್ಳಬೇಕಾಗಿಲ್ಲ. ಒಂದು ತಿಂಗಳ ಹಿಂದೆ ಯಡಿಯೂರಪ್ಪ ಅವರ ಜತೆ ಮಾತನಾಡಿದ್ದೆ. ಆಗ ಅವರು ಮೂರುವರೆ ವರ್ಷ ಚೆನ್ನಾಗಿ ದೀನ ದುರ್ಬಲರ ಪರವಾಗಿ ಆಡಳಿತ ಮಾಡುತ್ತೇನೆ. ಆ ಮೇಲೆ ಯಾವುದೇ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಮತ್ತು ಜನ ಎಲ್ಲ ರೀತಿಯ ಜವಾಬ್ದಾರಿ, ಅಧಿಕಾರ ಕೊಟ್ಟಿದ್ದಾರೆ. ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು, ಎಂದು ತಿಳಿಸಿದರು.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!