ಕ್ಯಾನ್ಸರ್ ನಂತಹ ಮಾರಕ ಖಾಯಿಲೆ ಇದ್ದರೂ ಪವಾಡ ಸದೃಶ ರೀತಿಯಲ್ಲಿ ಬದುಕುತ್ತಿರುವ ಎನ್. ಮುತ್ತಪ್ಪ ರೈ
ರಾಮನಗರ : (ಜ.20) ಕ್ಯಾನ್ಸರ್ ನನ್ನನ್ನು ಸಾವಿನ ದವಡೆಗೆ ನೂಕಿರುವುದು ನಿಜ ಆದರೆ ಪವಾಡ ಸದೃಶ ರೀತಿಯಲ್ಲಿ ಬದುಕುತ್ತಿದ್ದೇನೆ ಎಂದು ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎನ್ ಮುತ್ತಪ್ಪ ರೈ ಹೇಳಿದ್ದಾರೆ.
ಕಳೆದ ವರ್ಷ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹೋಗುವ ಸಂದರ್ಭದಲ್ಲಿ ಬೆನ್ನು ನೋವು ಕಾಣಿಸಿಕೊಂಡಿತು.ನಂತರ ಪರೀಕ್ಷೆ ಮಾಡಿದ ಸಂದರ್ಭ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು ಚಿಕಿತ್ಸೆಯನ್ನು ದೆಹಲಿಯ ಮ್ಯಾಕ್ಸ್, ಚೆನೈ ನ ಅಪೋಲೊ ಮತ್ತು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಪಡೆದಿರುವುದಾಗಿ ಕ್ಯಾನ್ಸರ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದರು. ಕ್ಯಾನ್ಸರ್ 90% ಗುಣವಾಗಿದ್ದಾಗಿ ವೈದ್ಯರು ತಿಳಿಸಿದ್ದರು. ಆದರೆ ನಂತರದಲ್ಲಿ ಮಿದುಳಿಗೆ ಕ್ಯಾನ್ಸರ್ ತಗುಲಿತ್ತು. ಕೆಲವು ತಿಂಗಳಷ್ಟೇ ಬದುಕವುದಾಗಿ ವೈದ್ಯರು ಹೇಳಿದರು. ಹೀಗಾಗಿ ಬಿಡದಿಗೆ ವಾಪಸ್ಸು ಆಗಿದ್ದೇನೆ, 5 ಗುಂಡು ಬಿದ್ದರೂ ಬದುಕಿದವನು ನಾನು ಇವಾಗ ನನಗೆ 68 ವರ್ಷ ನಾನು ಸಾವಿಗೆ ಹೆದರುವುದಿಲ್ಲ ವಿಲ್ ಪವರ್ ನಿಂದ ಬದುಕುತ್ತಿದ್ದೇನೆ. ಸಮಾಜ ಸೇವೆ ಮುಂದುವರಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿ ಯಲ್ಲಿ ಮುತ್ತಪ್ಪ ರೈ
ನಾನು ವರ್ಷಕ್ಕೆ 25 ರಿಂದ 30 ಕೋಟಿ ತೆರಿಗೆ ಕಟ್ಟುತ್ತಿದ್ದೇನೆ ನನ್ನ ಆಸ್ತಿಯ ಕುರಿತು ಈಗಾಗಲೇ ವಿಲ್ ಮಾಡಿಸಿದ್ದು, ಮಕ್ಕಳಿಗೂ ಈ ಬಗ್ಗೆ ತಿಳಿಸಿದ್ದು ಮತ್ತು ಕಳೆದ 15 – 20 ವರ್ಷದಿಂದ ನನ್ನ ಜೊತೆಗಿರುವವರಿಗೆ ಒಂದೊಂದು ಮನೆ ನಿವೇಶನ ಕೊಡುವಂತೆ ತಿಳಿಸಿದ್ದೇನೆ ಹಾಗೂ ಕರ್ನಾಟಕ ಅಥ್ಲೇಟಿಕ್ಸ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸ್ಧಾನಕ್ಕೆ ಹೊಸಬರನ್ನು ನೇಮಿಸಿದ್ದೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.