ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ನಾಳೆ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನಕ್ಕೆ.

ಪುತ್ತೂರು : (ಜ.23) ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇದರ ಅಷ್ಟಬಂಧ ಬ್ರಹ್ಮಕಲಶ ಕಾರ್ಯವು ಏಪ್ರಿಲ್ 21 ರಿಂದ 26 ರ ವರೆಗೆ ನಡೆಯಲ್ಲಿದ್ದು. ಬ್ರಹ್ಮಕಲಶದ ವಿವಿಧ ಸಮಿತಿಯ ಸಭೆಯು ನಾಳೆ ಜ. 24 ರಂದು ಮಠಂತಬೆಟ್ಟು ದೇವಸ್ಥಾನದ ವಠಾರದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲ್ಲಿದ್ದು, ಈ ಸಭೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹಾಗೂ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇದರ ಬ್ರಹ್ಮಕಲಶ ಸಮಿತಿ ಗೌರವಧ್ಯಕ್ಷರಾದ ಶ್ರೀ ಡಿ.ವಿ. ಸದಾನಂದ ಗೌಡ ಭಾಗವಹಿಸಲಿದ್ದು. ನಂತರ ದೇವಸ್ಥಾನದಲ್ಲಿ ನಡೆಯುವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ರೈ, ರೈ ಎಸ್ಟೇಟ್ ಕೋಡಿಂಬಾಡಿ ತಿಳಿಸಿದ್ದಾರೆ.

D V Sadananda Gowda

ಈ ಸಂದರ್ಭದಲ್ಲಿ ಬ್ರಹ್ಮಕಲಶದ ವಿವಿಧ ಸಮಿತಿ ಸಂಚಾಲಕರು ಹಾಗೂ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತು ಭಕ್ತಾದಿಗಳು
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಸಂಚಾಲಕರಾದ ಜಯಪ್ರಕಾಶ್ ಬದಿನಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!