ಫೆ.28 ಮಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ.

ಮಂಗಳೂರು : (ಫೆ. 11)  ಚುನಾವಣೆ ನಡೆದು ಸುಮಾರು ಮೂರು ತಿಂಗಳ ಬಳಿಕ ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಫೆ. 28ರಂದು ಚುನಾವಣೆ ನಡೆಯಲಿದೆ.

ಪಾಲಿಕೆಯಲ್ಲಿ ಬಹುಮತ ಪಡೆದಿರುವ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಸ್ಪರ್ಧಿಸಲಿದ್ದಾರೆ. ಮೇಯರ್ ಸ್ಥಾನಕ್ಕೆ 46ನೆ ಕಂಟೋನ್ಮೆಂಟ್ ವಾರ್ಡ್‌ನ ಬಿಜೆಪಿಯ ದಿವಾಕರ ಪಾಂಡೇಶ್ವರ ಬಹುತೇಕವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಉಳಿದಂತೆ, ಕಾರ್ಪೊರೇಟರ್‌ಗಳಾದ ಶರತ್, ಜಯಾನಂದ ಅಂಚನ್ ಸೇರಿದಂತೆ ಹಲವರ ಹೆಸರು ಕೂಡ ಕೇಳಿ ಬರುತ್ತಿದೆ.

Mangalore corporation

2019ರ ನ.12ರಂದು ಪಾಲಿಕೆ ಚುನಾವಣೆ ನಡೆದು, ನ. 14ರಂದು ಫಲಿತಾಂಶ ಪ್ರಕಟವಾಗಿತ್ತು. ಮಹಾನಗರ ಪಾಲಿಕೆಯ 60 ವಾರ್ಡ್‌ಗಳಲ್ಲಿ 44 ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಿತ್ತು. ಆದರೆ, ಮೇಯರ್ ಮೀಸಲಾತಿ ಕುರಿತಂತೆ ಎದ್ದಿದ್ದ ಗೊಂದಲದ ಕಾರಣದಿಂದ ಮೂರು ತಿಂಗಳಿನಿಂದ ಮೇಯರ್-ಉಪ ಮೇಯರ್ ಆಯ್ಕೆ ನಡೆದಿರಲಿಲ್ಲ.

ಪ್ರಾದೇಶಿಕ ಆಯುಕ್ತರು ಫೆ.28ಕ್ಕೆ ಮೇಯರ್-ಉಪ ಮೇಯರ್ ಚುನಾವಣೆ ನಡೆಸುವ ಬಗ್ಗೆ ಮಂಗಳೂರು ಪಾಲಿಕೆ ಆಯುಕ್ತರಿಗೆ ಮಂಗಳವಾರ ಪತ್ರದ ಮೂಲಕ ತಿಳಿಸಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಪಾಲಿಕೆಗೆ ಹೊಸದಾಗಿ ಆಯ್ಕೆಯಾದ 60 ಕಾರ್ಪೊರೇಟರ್‌ಗಳ ಪ್ರಮಾಣ ವಚನ ಸ್ವೀಕಾರ ಆರಂಭದಲ್ಲಿ ನಡೆಯಲಿದ್ದು, ಪಾಲಿಕೆ ನೂತನ ಪರಿಷತ್ ಅಸ್ತಿತ್ವಕ್ಕೆ ಬರಲಿದೆ. ನಂತರ ಮೇಯರ್-ಉಪಮೇಯರ್ ಚುನಾವಣೆ ನಡೆಯಲಿದೆ. ಬಳಿಕ ಅಗತ್ಯವಿದ್ದರೆ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆ ನಡೆಯಲಿದೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!