ದುಬೈನಿಂದ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ – ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು : (ಮಾ.09) ದುಬೈನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸ್ಪಷ್ಟನೆ ನೀಡಿದ್ದು, ಆ ವ್ಯಕ್ತಿ ಯಲ್ಲಿ ಕೊರೊನಾ ಅಂಶ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

Corona virus

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಆಗಮಿಸಿದ್ದ ಪ್ರಯಾಣಿಕರ ಸ್ಕ್ರೀನಿಂಗ್ ವೇಳೆ ದುಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರ ದೇಹದ ಉಷ್ಣತೆ ಹೆಚ್ಚಿದ್ದ ಹಿನ್ನಲೆ, ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ವ್ಯಕ್ತಿಯ ಗಂಟಲಿನ ಕಫ ದ್ರವವನ್ನು ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಿಕೊಡಲಾಗಿತ್ತು. ಪರೀಕ್ಷೆಯ ಮಾಹಿತಿ ಬಂದಿದ್ದು, ವ್ಯಕ್ತಿಯಲ್ಲಿ ಶಂಕಿತ ಕೊರೋನಾ ವೈರಸ್ ಅಂಶ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಮಾಹಿತಿ ನೀಡಿದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ವಿಮಾನ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿಯಲ್ಲಿ ಯಾವುದೇ ರೀತಿಯ ಕೊರೋನಾದ ಅಂಶ ಪತ್ತೆಯಾಗಿಲ್ಲ, ವ್ಯಕ್ತಿಯಲ್ಲಿ ಚಿಕಿತ್ಸೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆ ಮಂಗಳೂರಿನ ಜನ ಹೆದರಬೇಕಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ದಾರೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!