ದ.ಕ ಜಿಲ್ಲೆಗೆ 73 ಲಕ್ಷ ರೂ. ಗಳ 2 ನೇ ಹಂತದ ನೆರವು ನೀಡಿದ  ಸುಧಾಮೂರ್ತಿ

ಮಂಗಳೂರು : (ಮಾ.29) ಪೊಲೀಸ್ ಇಲಾಖೆಯ ಮನವಿಗೆ ಸ್ಪಂದಿಸಿದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ 73 ಲಕ್ಷ ರೂ ಗಳ ತುರ್ತು ವೈದ್ಯಕೀಯ ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ಶನಿವಾರವಷ್ಟೇ ಪೊಲೀಸ್ ಇಲಾಖೆ ಮನವಿ ಮಾಡಿದ 36 ಗಂಟೆಯೊಳಗೆ 28 ಲಕ್ಷ ರೂ ವೈದ್ಯಕೀಯ ಸಾಮಾಗ್ರಿ ರವಾನಿಸಿದ್ದರು. ಇದೀಗ ಎರಡನೇ ಹಂತದಲ್ಲಿ ಮತ್ತೆ ನೆರವಿನ ಹಸ್ತ ನೀಡಿದ್ದಾರೆ.

Sudha murthy

ದ.ಕ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತುರ್ತು ವೈದ್ಯಕೀಯ ಸಾಮಾಗ್ರಿಗಳ ನೆರವು ನೀಡಬೇಕೆಂದು ದ.ಕ ಜಿಲ್ಲಾಡಳಿತದ ಪರವಾಗಿ ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿತ್ತು ತಕ್ಷಣ ಸ್ಪಂದಿಸಿದ ಅವರು ಅಗತ್ಯ ವೈದ್ಯಕೀಯ ಸಾಮಾಗ್ರಿ ಕಳುಹಿಸಿಕೊಟ್ಟಿದ್ದರು. ಇಂದು ಮತ್ತೆ ಎನ್ -95 ಮಾಸ್ಕ್, ಸ್ಯಾನಿಟೈಸರ್, ವೈದ್ಯಕೀಯ ರಕ್ಷಣಾ ಸಲಕರಣೆ ಸೇರಿದಂತೆ 73ಲಕ್ಷ ರೂ.ಗಳ ಸಾಮಾಗ್ರಿ ಕಳುಹಿಸಿಕೊಟ್ಟಿದ್ದಾರೆ. ಇವುಗಳನ್ನು ವೈದ್ಯರು, ನರ್ಸ್, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಸಿಬ್ಬಂದಿಗಳಿಗೆ ನೀಡಲಾಗುತ್ತದೆ. ನಿರಂತರವಾಗಿ ಕಾರ್ಯನಿರತರಾಗಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಮಾಸ್ಕ್ ಗಳನ್ನು ವಿತರಿಸಲಾಗುತ್ತದೆ. ಈ ಬಗ್ಗೆ ಬಗ್ಗೆ ಟ್ವೀಟ್ ಮಾಡಿರುವ ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಶ್ರೀಮತಿ ಸುಧಾ ಮೂರ್ತಿ ಹಾಗೂ ಇನ್ಫೋಸಿಸ್ ಫೌಂಡೇಶನ್‌ನ ರಾಮದಾಸ್ ಕಾಮತ್ ಮತ್ತು ಅವರ ತಂಡಕ್ಕೆ ವಿಶೇಷ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!