ಬ್ರೇಕಿಂಗ್ ಏ.14ಕ್ಕೆ ಲಾಕ್ ಡೌನ್ ಮುಕ್ತಾಯ, ವಿಸ್ತರಣೆಯಿಲ್ಲ – ಕೇಂದ್ರ ಸರ್ಕಾರದ ಸ್ಪಷ್ಟನೆ

ನವದೆಹಲಿ : (ಮಾ.30) ಏಪ್ರಿಲ್ 14ರ ದೇಶಾದ್ಯಂತದ ಲಾಕ್ ಡೌನ್ ಅನ್ನು ಅನಂತರವೂ ಮತ್ತೆ ಮುಂದುವರೆಯಲಿದೆ ಎಂದು ಅನೇಕ ಸುದ್ದಿಗಳು ಹರಿದಾಡುತ್ತಿವೆ. ಆದ್ರೇ ಏಪ್ರಿಲ್ 14ರ ನಂತರ ಲಾಕ್ ಡೌನ್ ಮುಕ್ತಾಯವಾಗಲಿದೆ. ಲಾಕ್ ಡೌನ್ ವಿಸ್ತರಣೆಯ ಯಾವುದೇ ಉದ್ದೇಶ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬ, ನನಗೆ ದೇಶಾದ್ಯಂತ ಏಪ್ರಿಲ್ 14ರ ನಂತ್ರವೂ ಲಾಕ್ ಡೌನ್ ವಿಸ್ತರಣೆಯಾಗಲಿದೆ ಎಂಬ ವರದಿ ಕೇಳಿ ಅಚ್ಚರಿಯಾಯಿತು.

Rajeev gouba

ಆದ್ರೇ ಇದು ಸತ್ಯಕ್ಕೆ ದೂರವಾದ ಮಾತಾಗಿದೆ. ಇಂತಹ ಯಾವುದೇ ನಿರ್ಧಾರ ಸರ್ಕಾರದ ಮುಂದೆ ಇಲ್ಲ. ಏಪ್ರಿಲ್ 14ಕ್ಕೆ ದೇಶಾದ್ಯಂತ ಲಾಕ್ ಡೌನ್ ಕೊನೆಗೊಳ್ಳಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಅಂದಹಾಗೇ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ವೈರಸ್ ಮತ್ತಷ್ಟು ಜನರಿಗೆ ಹರಡದಂತೆ ದೇಶಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದ್ದರು. ಏಪ್ರಿಲ್ 14ರ ವರೆಗೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿತ್ತು. ಈ ನಿಯಮ ಮತ್ತೆ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮತ್ತೆ ವಿಸ್ತರಣೆಯಾಗಲಿದೆ ಎನ್ನಲಾಗುತ್ತಿತ್ತು. ಆದ್ರೇ ಇಂತಹ ಊಹಾಪೋಹಗಳಿಗೆ ಇದೀಗ ತೆರೆ ಬಿದ್ದಿದೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!