ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ

ಬೆಂಗಳೂರು : (ಮೇ.15) ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (ವ.68) ನಿಧನರಾಗಿದ್ದಾರೆ, ಕೆಲವು ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಮುತ್ತಪ್ಪ ರೈ  ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕೆಲದಿನಗಳಿಂದ ಅವರ ಆರೊಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ವೆಂಟಿಲೇಟರ್​ನ ಸಹಾಯದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ತಡರಾತ್ರಿ ಸುಮಾರು 2.30 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬೆಳಗ್ಗೆ 8 ಗಂಟೆಗೆ ಮಗ ರಿಕಿ ರೈ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

Muttappa rai

ಹಲವು ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಕಾಣಿಸಿಕೊಂಡಿದ್ದ ಮುತ್ತಪ್ಪ ರೈ, ನಂತರ ಅಲ್ಲಿಂದ ಹೊರ ಬಂದು ವಿಭಿನ್ನ ಬದುಕು ಕಟ್ಟಿಕೊಂಡಿದ್ದರು. ಬೆಂಗಳೂರಿನ ಬಿಡದಿ ಬಳಿ ವಾಸವಾಗಿದ್ದ ರೈ, ಜಯ ಕರ್ನಾಟಕ ಹೆಸರಿನಲ್ಲಿ ಸಂಘಟನೆ ಕಟ್ಟಿ ಲಕ್ಷಾಂತರ ಸದಸ್ಯರನ್ನು ನೋಂದಾಯಿಸಿದ್ದರು.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!