ಎಸ್.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಮಾಲಿಕ ಸಿದ್ದಾರ್ಥ್ ಮಗ ಜತೆ ಡಿಕೆಶಿ ಪುತ್ರಿ ಐಶ್ವರ್ಯ ನಿಶ್ಚಿತಾರ್ಥ.

ಬೆಂಗಳೂರು : (ಜೂ.15) ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ಥ್ಯ ಜೊತೆ ಸೋಮವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Dk shivakumar

ಡಿ.ಕೆ ಶಿವಕುಮಾರ್ ಮತ್ತು ಸಿದ್ಧಾರ್ಥ್ ಆತ್ಮೀಯ ಸ್ನೇಹಿತರು ಮಾತ್ರವಲ್ಲ, ಉದ್ಯಮದಲ್ಲಿ ಪಾಲುದಾರರು ಕೂಡ. ಸಿದ್ಧಾರ್ಥ್ ಮಾವ ಅಂದರೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಶಿವಕುಮಾರ್ ಗೆ ರಾಜಕೀಯ ಗುರುವಾಗಿದ್ದವರು. ಹೀಗಾಗಿ ಎಸ್ಎಂ ಕೃಷ್ಣ ಅವರ ಮೊಮ್ಮಗನೊಂದಿಗೆ ಶಿವಕುಮಾರ್ ಪುತ್ರಿ ವಿವಾಹ ನಿಶ್ಚಯವಾಗಿದೆ. ಇಂದು ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿಯೇ ಐಶ್ವರ್ಯಾ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಎಂಸ್ ಕೃಷ್ಣ ಹಾಗೂ ಅವರ ಕುಟುಂಬ ಆಗಮಿಸಿತ್ತು.

S M krishna

ಮೂರು ದಿನಗಳ ಹಿಂದೆಯಷ್ಟೇ ಎಸ್‍ಎಂ ಕೃಷ್ಣ ನಿವಾಸಕ್ಕೆ ಡಿಕೆಶಿ ಕುಟುಂಬ ಭೇಟಿ ನೀಡಿತ್ತು. ಇಂದು ಗುರು-ಹಿರಿಯ ಸಮ್ಮಖದಲ್ಲಿ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಾ ಗೆ ನಿಶ್ಚಿತಾರ್ಥ ನಡೆದಿದೆ. ಇದೇ ತಿಂಗಳ 12ರಂದು ಡಿ.ಕೆ.ಶಿವಕುಮಾರ್ ಕುಟುಂಬದವರು ಸದಾಶಿವನಗರದ ಎಸ್.ಎಂ.ಕೃಷ್ಣ ನಿವಾಸಕ್ಕೆ ತೆರಳಿ ಮದುವೆ ಮಾತುಕತೆ ನಡೆಸಿದ್ದರು. ಕಳೆದ ಒಂದು ತಿಂಗಳಿಂದಲೂ ಡಿಕೆಶಿ ಪುತ್ರಿ ಐಶ್ವರ್ಯ ಹಾಗೂ ಅಮರ್ಥ್ಯ ಸುಬ್ರಮಣ್ಯ ವಿವಾಹ ಸಂಬಂಧ ಎರಡು ಕುಟುಂಬಗಳು ಮಾತುಕತೆ ನಡೆಸುತ್ತಲೇ ಇದ್ದರು.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!