ಶ್ರೀ ಕ್ಷೇತ್ರ ಸುಬ್ರಮಣ್ಯಕ್ಕೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭೇಟಿ.

ಮಂಗಳೂರು : (ಜೂ.15) ಕೆಪಿಸಿಸಿ ಕಾರ್ಯದ್ಯಕ್ಷ ಈಶ್ವರ್ ಖಂಡ್ರೆ ಯವರು ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ಭೇಟಿ ಬಳಿಕ ಮಾದ್ಯಮ ಮಿತ್ರರೊರ್ವರು ಭೇಟಿಯ ಬಗ್ಗೆ ಪ್ರಶ್ನಿಸಿದಾಗ ಇಡೀ ಪ್ರಪಂಚಕ್ಕೆ ಮಹಾಮಾರಿ ಕೊರೊನ ರೋಗ ಬಂದು ಜನತೆ ಹಲವು ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದು ಇದಕ್ಕೆಲ್ಲ ಮುಕ್ತಿ ಸಿಗಲಿ, ರಾಜ್ಯಕ್ಕೆ, ರಾಷ್ಟ್ರಕ್ಕೆ ಒಳಿತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡೆ ಎಂದು ಹೇಳಿದ್ದರು.

Eshwar khandre

ಈ ಸಂದರ್ಭದಲ್ಲಿ ನಿತ್ಯಾನಂದ ಮುಂಡೋಡಿ, ಕೊಡಗು ಕಾಂಗ್ರೆಸ್ ಉಸ್ತುವಾರಿ ವೆಂಕಪ್ಪ ಗೌಡ, ವಿಮಲಾ ರಂಗಯ್ಯ, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸೂರಜ್ ಹೊಸೂರು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಸುರೇಶ್ ಎಂ ಹೆಚ್, ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ರವಿಕುಮಾರ್ ರುದ್ರಪಾದ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ಗುತ್ತಿಗಾರು ಜಿಲ್ಲಾ ಪಂಚಾಯತ್ ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ್ ಉಜಿರಡ್ಕ, ಶಿವರಾಮ ರೈ, ಸುಬ್ರಮಣ್ಯ ಭಟ್, ಮಾಧವ ಸುಬ್ರಮಣ್ಯ, ಸುಳ್ಯ ವಿಧಾನ ಸಭಾ ಕ್ಷೇತ್ರದ ಎನ್. ಎಸ್. ಯು. ಐ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಮೊದಲಾದವರು ಉಪಸ್ಥಿತರಿದ್ದರು.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!