ಜನಾರ್ದನ ಪೂಜಾರಿಯ ಆರೋಗ್ಯ ವೃದ್ಧಿಗಾಗಿ ಶ್ರೀ ಮೃತ್ಯುಂಜಯೇಶ್ವರ ದೇವರಿಗೆ ಕಾವು ಹೇಮನಾಥ್ ಶೆಟ್ಟಿ ದಂಪತಿಗಳ ನೇತೃತ್ವದಲ್ಲಿ ವಿಶೇಷ ಪೂಜೆ.

ಮಂಗಳೂರು : (ಜು.08) ಕೊರೋನ ಕೋವಿಡ್ -19 ಸೋಂಕಿನಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಭಾರತ ಸರ್ಕಾರದ ಮಾಜಿ‌ ಸಚಿವ ಬಿ. ಜನಾರ್ದನ ಪೂಜಾರಿ ಯವರು ಶೀಘ್ರವಾಗಿ ಗುಣಮುಖರಾಗಲೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ್ ಶೆಟ್ಟಿ ಮತ್ತು ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ ದಂಪತಿಗಳ ನೇತೃತ್ವದಲ್ಲಿ ರಾಜ್ಯದ ಕಾರಣೀಕ ಕ್ಷೇತ್ರವೆನಿಸಿರುವ ಪುತ್ತೂರು ತಾಲೂಕಿನ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಸೇವೆ ನಡೆಸಿ ಮೃತ್ಯುಂಜಯ ಜಪ ಪಠಿಸಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.

Hemanath shetty

ಈ ಸಂದರ್ಭದಲ್ಲಿ ಕಾವು ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ‌ ನಿಕಟಪೂರ್ವ ಅಧ್ಯಕ್ಷ ದಿವ್ಯನಾಥ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಪರಮೇಶ್ವರ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ಮಹೇಶ್ ರೈ ಅಂಕೊತ್ತಿಮಾರ್, ವೇದನಾಥ ಸುವರ್ಣ, ಪುತ್ತೂರು ಪುರಸಭೆಯ ಮಾಜಿ‌ ಉಪಾಧ್ಯಕ್ಷ ಲ್ಯಾನ್ಸಿ ಮಸ್ಕರೇನಸ್, ಕೆಮ್ಮಿಂಜೆ ಷಣ್ಮುಖ‌ ಸುಬ್ರಹ್ಮಣ್ಯ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಕೇಶವ ಬೆದ್ರಾಳ, ಮೃತ್ಯುಂಜಯೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಮಹೇಶ್ಚಂದ್ರ ಸಾಲಿಯಾನ್, ಆಶ್ರಯ ಸಮಿತಿ‌ ಮಾಜಿ‌ ಸದಸ್ಯ ಚಂದ್ರಶೇಖರ ಅಶ್ವಿನಿ, ನರಿಮೊಗರು ಸೇವಾ ಸಹಕಾರಿ ಸಂಘದ ನಿರ್ದೇಶಕ ಹೊನ್ನಪ ಪೂಜಾರಿ ‌ಕೈಂದಾಡಿ, ನರಿಮೊಗರು‌ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ, ಪುತ್ತೂರು ಬ್ಲಾಕ್ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ನವೀನ್ ರೈ ಚೆಲ್ಯಡ್ಕ,

Hemanath shetty

ಪುತ್ತೂರು ಬ್ಲಾಕ್ ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಸಿ. ಅಶೋಕ್ ಶೆಟ್ಟಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಸಂಯೋಜಕ ಜಗದೀಶ್ ಕಜೆ, ಮಾಧವ ಸಾಲಿಯಾನ್, ಸಾಮಾಜಿಕ‌ ಕಾರ್ಯಕರ್ತ ಮಂಜು ಸುವರ್ಣ, ಪುತ್ತೂರು ವಿಧಾನಸಭಾ ಕ್ಷೇತ್ರದ ಯುವಕ ಕಾಂಗ್ರೆಸ್ ಕಾರ್ಯದರ್ಶಿ ಗಗನ್ ಶೆಟ್ಟಿ, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಬೇಬಿ ಜಾನ್, ನೇಮಾಕ್ಷ ಸುವರ್ಣ,ರವಿಚಂದ್ರ ಆಚಾರ್ಯ, ಬಾಬು ದರ್ಭೆತ್ತಡ್ಕ, ನಾಗೇಶ್ ಕುಂಬ್ರ ಇನ್ನಿತ್ತರು ಉಪಸ್ಥಿತರಿದ್ದರು..

CATEGORIES
TAGS
Share This

COMMENTS

Wordpress (0)
Disqus ( )
error: Content is protected !!