ನ. 24ರಂದು ಮಂಗಳೂರಿನಲ್ಲಿ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಸನ್ಮಾನ

ಪುತ್ತೂರು : (ನ.21) ಕಾರ್ಮಿಕ ಕಾಯಿದೆಯ ಪ್ರಕಾರ ನೋಂದಾಯಿತಗೊಂಡಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನ. ೨೪ರಂದು ಮಂಗಳೂರು ಬೊಕ್ಕಪಟ್ಣ ಶ್ರೀ ಬ್ರಹ್ಮ ಬಬ್ಬರ್ಯ ದೈವಸ್ಥಾನದ ಹಿಂದುಗಡೆಯ ರಾಣಿ ಅಬ್ಬಕ್ಕ ನೌಕೆಯಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ದ.ಕ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಕ್ಷೇತ್ರ ಶಾಸಕ ಯು.ಟಿ.ಖಾದರ್ ಮತ್ತು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯಾಧ್ಯಕ್ಷ ಬಿ.ನಾರಾಯಣರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಂಪಿ ಕನ್ನಡ ವಿವಿ ನಿವೃತ್ತ ಪ್ರೊಫೆಸರ್ ಡಾ| ಚಂದ್ರ ಪೂಜಾರಿ ರವರು ”ಅಭಿವ್ಯಕ್ತಿ ಸ್ವಾತಂತ್ರ್ಯ-ತತ್ವ ಮತ್ತು ಆಚರಣೆ” ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕೆ.ಜೆ.ಯು ದ.ಕ.ಜಿಲ್ಲಾಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕೆ.ಜೆ.ಯು ಬೆಂಗಳೂರು ಇದರ ಗೌರವಾಧ್ಯಕ್ಷ ಕೆ.ವಿ. ರಾಜೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿ ನರೇಂದ್ರನಾಥ್, ಕಾರ್ಯದರ್ಶಿ ರಾಘವೇಂದ್ರ ಕೆಸವಳಲು, ಉಪಾಧ್ಯಕ್ಷ ಈ.ಟಿ. ಕೇರ್ ರಾಜು ಮತ್ತು ಚಿಕ್ಕಮಗಳೂರು ಜಿಲ್ಲಾ ಕೆ.ಜೆ.ಯು ಅಧ್ಯಕ್ಷ ಜಯಕುಮಾರ್ ಕೆ. ರವರು ವಿಶೇಷ ಉಪಸ್ಥಿತರಿರಲಿದ್ದಾರೆ.

U L udaya kumar

ಯು. ಎಲ್ ಅದರ ಕುಮಾರ್

ಹಿರಿಯ ಪತ್ರಕರ್ತರಿಗೆ ಸನ್ಮಾನ :

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ರಿಚರ್ಡ್ ಲಸ್ರಾದೊ ಮಂಗಳೂರು, ವಿ4 ನ ಲಕ್ಷ್ಮಣ ಕುಂದರ್ ಮಂಗಳೂರು, ಸುಳ್ಯದ ಜಯಪ್ರಕಾಶ್ ಕುಕ್ಕೇಟಿ, ಕಡಬದ ಜನಾರ್ದನ ಎಸ್. ಪುರಿಯ, ಪುತ್ತೂರಿನ ಯು.ಎಲ್.ಉದಯಕುಮಾರ್, ಬೆಳ್ತಂಗಡಿಯ ಆರ್.ಎನ್. ಪೂವಣಿ ಉಜಿರೆ, ಬಂಟ್ವಾಳದ ರಾಜಾ ಬಂಟ್ವಾಳ್ ಮತ್ತು ವಿಟ್ಲದ ಹಮೀದ್ ವಿಟ್ಲರವರಿಗೆ ಸನ್ಮಾನ ನಡೆಯಲಿದೆ.

ಅಪರಾಹ್ನ ೩ರಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ಕೆ.ಜೆ.ಯು ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ವಿಶೇಷ ಆಹ್ವಾನಿತರಾಗಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ.

ಕೆಜೆಯು ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನಿಸಲ್ಪಡುವ ಪತ್ರಕರ್ತರನ್ನು ಆಯ್ಕೆ ಮಾಡಲು ಆಯಾಯ ತಾಲೂಕು ಸಮಿತಿಯವರಿಗೆ ಅವಕಾಶ ನೀಡಲಾಗಿತ್ತು. ಜಿಲ್ಲೆಯ ಪ್ರತೀ ತಾಲೂಕಿನಿಂದ ಓರ್ವ ಹಿರಿಯ ಪತ್ರಕರ್ತರನ್ನು ಸನ್ಮಾನಕ್ಕೆ ಆಯ್ಕೆ ಮಾಡಲಾಗಿದ್ದು ಪುತ್ತೂರು ತಾಲೂಕಿನಿಂದ ಉಪ್ಪಿನಂಗಡಿ ನಿವಾಸಿ, ಕಳೆದ 27 ವರ್ಷಗಳಿಂದ ಹೊಸ ದಿಗಂತ ಸಹಿತ ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರೂ ಆಗಿರುವ ಉದಯ ಕುಮಾರ್ ಯು.ಎಲ್.ರವರನ್ನು‌ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯವರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!