ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಬಿಜೆಪಿಯ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ – ಡಿಕೆಶಿ

ಬೆಂಗಳೂರು : (ಏ.30) ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಇಂದು ಹೊರಬಿದ್ದಿದ್ದು,ನಿರೀಕ್ಷೆಯಂತೆಯೇ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಈ ಫಲಿತಾಂಶವು ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

Dk shivakumar

ನಗರ ಪ್ರದೇಶದ ಜನತೆ ಎಂದಿಗೂ ಕಾಂಗ್ರೆಸ್ ಪಕ್ಷದ ಪರ ಇದ್ದಾರೆ ಎಂಬುದನ್ನು ಈ ಚುನಾವಣೆಯು ಎತ್ತಿಹಿಡಿದಿದೆ. ಇದೇ ರೀತಿಯ ಫಲಿತಾಂಶವು ಮುಂದಿನ ಚುನಾವಣೆಗಳಲ್ಲೂ ಕಂಡು ಬರುತ್ತದೆ ಎಂಬ ವಿಶ್ವಾಸ‌ ನನಗಿದೆ. ಇಂದು ಗೆಲುವು ಸಾಧಿಸಿರುವ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಈ ಗೆಲುವು ಜನಸೇವೆಗಾಗಿ ನಮಗೆ ಸಿಕ್ಕಿರುವ ಒಂದು ಅವಕಾಶ ಎಂಬುದನ್ನು ಯಾರೂ ಮರೆಯಬಾರದು ಹಾಗೂ ಸದ್ಯದ ಪರಿಸ್ಥಿತಿಯಲ್ಲಿ ಗೆಲುವಿನ ಸಂಭ್ರಮಾಚರಣೆ ಬದಲು, ನಿಮ್ಮನ್ನು ಗೆಲ್ಲಿಸಿದ ಜನರ ಸೇವೆಗಾಗಿ ಈ ಸಮಯವನ್ನು ಮೀಸಲಿಡಿ ಎಂದು ನಾನು ತಮ್ಮೆಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ.

ಈ ಚುನಾವಣಾ ಗೆಲುವಿಗೆ ಕಾರಣೀಭೂತರಾದ ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ನಮ್ಮ ಅಭ್ಯರ್ಥಿಗಳ ಮೇಲೆ ನಂಬಿಕೆಯಿಟ್ಟು, ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ ರಾಜ್ಯದ ಜನತೆಗೆ ನಾನು ಚಿರಋಣಿ ಎಂದು ತಿಳಿಸಿದ್ದಾರೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!