ಕಾಪು ಪರಿಸರದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೊರಕೆ ಭೇಟಿ.

ಉಡುಪಿ : (ಮೇ.02) ಮಾಜಿ ಸಚಿವರು, ಕಾಪು ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿನಯ್ ಕುಮಾರ್ ಸೊರಕೆಯವರು ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಮೂಡಬೆಟ್ಟು ಕಟಪಾಡಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಕೋವಿಡ್ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದರು. ಹಾಗೂ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಬಳಲುತ್ತಿರುವವರಿಗೆ ನೀಡುವ ಚಿಕಿತ್ಸೆ ಮತ್ತು ಕಾಯಿಲೆ ಉದ್ಭವಿಸಿದಲ್ಲಿ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ವಿವರವಾಗಿ ಮಾಹಿತಿ ಪಡೆದುಕೊಂಡರು, ಅಲ್ಲದೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

Vinay Kumar Sorake

ಸಾರ್ವಜನಿಕರಿಗೆ ನೀಡುವ ವ್ಯಾಕ್ಸಿನ್ ಗಳ ಬಗ್ಗೆ ಮಾಹಿತಿ ಪಡೆದರು. ಅದರಲ್ಲೂ ಮುಖ್ಯವಾಗಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳ ಸಮಸ್ಯೆಯಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರ ಬೇಡಿಕೆಯ ಬಗ್ಗೆ ಮಾಜಿ ಸಚಿವರು ಸ್ಥಳದಲ್ಲಿ ದೂರವಾಣಿ ಕರೆ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಸಂಪರ್ಕಿಸಿ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮನವಿ ಮಾಡಿದರು. ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯಾಧಿಕಾರಿಗಳು ಹಾಗೂ ಕೊರೋನ ವಾರಿಯರ್ಸ್ ಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು, ತೀವ್ರಗತಿಯಿಂದ ಹರಡುತ್ತಿರುವ ಕರೋನಾ ಕಾಯಿಲೆಯನ್ನ ಮಟ್ಟಹಾಕಲು ಸಾರ್ವಜನಿಕರು ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದು ಅತೀ ಅಗತ್ಯವೆಂದು ತಿಳಿಸಿದರು.

Vinay Kumar sorake

ಮಾಜಿ ಸಚಿವರ ಭೇಟಿಯ ಸಂದರ್ಭದಲ್ಲಿ ಕಾಪು ವೈದ್ಯಾಧಿಕಾರಿ ಡಾl ಸುಬ್ರಾಯ ಕಾಮತ್, ಪಡುಬಿದ್ರೆ ವೈದ್ಯಾಧಿಕಾರಿ ಡಾ| ರಾಜ್ಯಶ್ರೀ ಕಿಣಿ, ಮುದರಂಗಡಿ ವೈದ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ಪ್ರಭು, ಮೂಡಬೆಟ್ಟು ವೈದ್ಯಾಧಿಕಾರಿ ಡಾ| ಶೈನಿ ಯವರು ಮಾಹಿತಿ ನೀಡಿದರು.
ಸಚಿವರೊಂದಿಗೆ ಪುರಸಭೆಯ ಮಾಜಿ ಉಪಾಧ್ಯಕ ಉಸ್ಮಾನ್, ಪಡುಬಿದ್ರೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮ್ ರಾಯ್ ಪಾಟ್ಕರ್, ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರತನ್ ಶೆಟ್ಟಿ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಸನಬ್ಬ ಶೇಕ್, ಹಾಗೂ ಮಾಜಿ ಸಚಿವರ ಆಪ್ತ ಕಾರ್ಯದರ್ಶಿ ಅಶೋಕ್ ನಾಯರಿ ಅವರು ಉಪಸ್ಥಿತರಿದ್ದರು.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!