ಪದವೀಧರ ವಿದ್ಯಾರ್ಥಿಗಳು ಸಂಪೂರ್ಣ ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿರುವ ಕಾಲೇಜಗಳ ಆಡಳಿತ ಮಂಡಳಿ ಕ್ರಮಕ್ಕೆ NSUI ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಖಂಡನೆ.

ಮಂಗಳೂರು : (ಮೇ.12) ಕೊರೋನಾ ಸಂಕಷ್ಟ ಕಾಲದಲ್ಲಿ ಪದವೀಧರ ವಿದ್ಯಾರ್ಥಿಗಳು ಸಂಪೂರ್ಣ ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿರುವ ಕಾಲೇಜಗಳ ಆಡಳಿತ ಮಂಡಳಿ ಕ್ರಮಕ್ಕೆ ಎನ್. ಎಸ್. ಯು. ಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

Sawad sullia

ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಬಳಿಕ ಪದವೀಧರ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಸದ್ಯ ದ್ವಿತೀಯ ಸೆಮಿಸ್ಟರ್ ತರಗತಿಯನ್ನು ಆನ್ ಲೈನ್ ಮೂಲಕ ಪ್ರಾರಂಭಿಸಲಾಗಿದೆ. ಈ ಮಧ್ಯೆ ವಿದ್ಯಾರ್ಥಿಗಳಿಗೆ ಇಡೀ ವರ್ಷದ ಶುಲ್ಕವನ್ನು ಪಾವತಿಸುವಂತೆ ಕಾಲೇಜು ಆಡಳಿತ ಮಂಡಳಿ ಕಟ್ಟುನಿಟ್ಟಿನ ನಿಯಮ ಹೇರಿದೆ. ಅಲ್ಲದೆ, ಈ ಕೂಡಲೇ ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಆನ್ ಲೈನ್ ತರಗತಿಗೆ ಸೇರಿಸಲಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದು, ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

Amrutha

    Advertisement

ಈ ಸಾಲಿನ ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಲ ಇನ್ನೂ ಕೂಡ ಸರ್ಕಾರದಿಂದ ಲಭಿಸಿಲ್ಲ. ಇದನ್ನೇ ಅವಲಂಭಿಸಿ ಶಿಕ್ಷಣ ಮುಂದುವರಿಸಿರುವ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ಕಾಲೇಜು ಮಂಡಳಿಯ ನಿಯಮದಿಂದನೂ ಬೇಸತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಇಂತಹ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ಶೀಘ್ರದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕೆಂದು ಸವಾದ್ ಸುಳ್ಯ ರವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!