ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರ – ದ.ಕ ಜಿಲ್ಲೆ ಬೆಂಬಲ

ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸುತ್ತಿರುವುದು
ಮಂಗಳೂರು : (ದ.15) ರಾಜ್ಯಾದ್ಯಂತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಸೇವಾಭದ್ರತೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ತರಗತಿ ಬಹಿಷ್ಕರಿಸಿ ನಡೆಯುತ್ತಿರುವ ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಅತಿಥಿ ಉಪನ್ಯಾಸಕರು ಬೆಂಬಲ ಸೂಚಿಸಿ ಇಂದು ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಕಛೇರಿ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ ಇವರಿಗೆ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕರ ತಂಡ
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಧೀರಜ್ ಕುಮಾರ್, ಉಪಾಧ್ಯಕ್ಷರುಗಳಾದ ಗೋಪಾಲಕೃಷ್ಣ, ಹೇಮಚಂದ್ರ, ವಿನೋದ, ವಸಂತ್ ಕುಮಾರ್, ಕಾರ್ಯದರ್ಶಿಗಳಾದ ಮಹಾಂತೇಶ್ ದಿಡ್ಡಿಮನಿ, ರಂಜಿತ್, ಶಾಂತಿ ಹಾಗೂ ಇತರ ಎಲ್ಲ ಕಾಲೇಜಿನ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.