ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ.

ಬಂಟ್ವಾಳ : (ಮಾ.12) ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕಿನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಜಯಂತಿ ವಿ‌.ಪೂಜಾರಿ ರವರನ್ನು ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ರವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಸರ್ಕಾರದಿಂದ ನೇಮಕಮಾಡಲಾಗಿದೆ.

ಜಯಂತಿ ವಿ ಪೂಜಾರಿ

ಇವರು ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಬಾಕಿಲ ನಿವಾಸಿಯಾಗಿದ್ದು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿದ್ದು ಪ್ರಸ್ತುತ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ, ದ‌.ಕ ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ, ದ.ಕ ಜಿಲ್ಲಾ ಕೆ.ಡಿ.ಪಿ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿರುತ್ತಾರೆ. ಶಿವಗಿರಿ ಮಹಿಳಾ ಸಹಕಾರಿ ಬ್ಯಾಂಕ್ ನ ಸ್ಥಾಪಕರಾಗಿ ಪ್ರಸ್ತುತ ಅಧ್ಯಕ್ಷರಾಗಿರುತ್ತಾರೆ ಹಾಗೂ ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಮಾಣಿ ವಲಯ ಜನಜಾಗೃತಿ ವೇದಿಕೆಯ ಸದಸ್ಯರಾಗಿದ್ದು ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರೀಯವಾಗಿದ್ದು ಉತ್ತಮ ಸಂಘಟಕಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!