20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಮಾಲಗತ್ತಿ

ಬಂಟ್ವಾಳ : (ಅ.28) ಬಂಟ್ವಾಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ , ಐ.ಪಿ.ಎಸ್. ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ. ಮೋಹನ್ ರಾವ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಸಮ್ಮೇಳನವು ಡಿಸೆಂಬರ್ 28 , 29 ರಂದು ಮಾಣಿ ಬಾಲವಿಕಾಸ ಆಂಗ್ಲ ಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಮೋಹನ್ ರಾವ್ ತಿಳಿಸಿದರು.

Dr malagatti
ಈ ಸಂದರ್ಭದಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಶ್ರೀ. ಜಡ್ತಿಲ ಪ್ರಹ್ಲಾದ್ ಶೆಟ್ಟಿ, ಸ್ವಾಗತ ಸಮಿತಿ ಕಾರ್ಯಧ್ಯಕ್ಷೆ ಶ್ರೀಮತಿ. ಮಂಜುಳಾ ಮಾಧವ ಮಾವೆ ( ಜಿಲ್ಲಾ ಪಂಚಾಯತ್ ಸದಸ್ಯರು) , ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಬಿ.ಎಂ ಅಬ್ಬಾಸ್ , ಕೆ.ಎನ್. ಗಂಗಾಧರ್ ಆಳ್ವ ಸೇರಿದಂತೆ ಹಲವರು ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮ  ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
Dr malagatti
ಸಮ್ಮೇಳನ ಸಮಿತಿ ಕೋಶಾಧಿಕಾರಿ ಜಗನ್ನಾಥ ಚೌಟ, ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೇರಾಜೆ, ಸಮಿತಿ ಕಾರ್ಯದರ್ಶಿ ನಾಗವೇಣಿ ಮಂಚಿ, ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀ ಗಂಗಾಧರ ರೈ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತ ಶೆಟ್ಟಿ, ಸಚಿನ್ ರೈ ಮಾಣಿಗುತ್ತು , ಮಾಣಿ ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಶೆಟ್ಟಿ ಉಪಸ್ಥಿತರಿದ್ದರು.

ವರದಿ : ಪ್ರಥಮ್ ರೈ

Advertising

CATEGORIES
Share This

COMMENTS

Wordpress (0)
Disqus (0 )
error: Content is protected !!