ನವೆಂಬರ್ 16: ಉದ್ಯಾವರದಲ್ಲಿ ಯು.ಎಫ್.ಸಿ. ಮಕ್ಕಳ ಹಬ್ಬ 2019

ಉಡುಪಿ : (ನ.12) 2017ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರೂರವರ 129ನೇ ಜನ್ಮದಿನದ ಹಿನ್ನಲೆಯಲ್ಲಿ ಜರಗುವ ಮಕ್ಕಳ ದಿನಾಚರಣೆ ಅಂಗವಾಗಿ 10ನೇ ವರ್ಷದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಸ್ಪರ್ಧೆ “ಯು.ಎಫ್.ಸಿ. ಮಕ್ಕಳ ಹಬ್ಬ-2019” ತಾ.16.11.2019 ಶನಿವಾರ ಬೆಳಿಗ್ಗೆ ಗಂಟೆ 9.30ರಿಂದ ಸಂಜೆ ಗಂಟೆ 4.30 ತನಕ ಉದ್ಯಾವರ ಶ್ರೀ ವಿಠೋಬ ರುಖುಮಾಯಿ ನಾರಾಯಣ ಗುರು ಮಂದಿರದಲ್ಲಿ ಜರಗಲಿದೆ.

Advertising

ಬೆಳಿಗ್ಗೆ ಗಂಟೆ 9.30ಕ್ಕೆ ಈ ಮಕ್ಕಳ ಹಬ್ಬವನ್ನು ಝೀ ಕನ್ನಡ ಚಾನೆಲ್‍ನ “ಕನ್ನಡ ಕೋಗಿಲೆ” ರಿಯಾಲಿಟಿ ಶೋ ವಿಜೇತೆ ಕು| ಸಂಹಿತಾ ಜಿ.ಪಿ. ಉದ್ಘಾಟಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ಕಾರ್ಯದರ್ಶಿ ಡಾ| ಗಣನಾಥ ಎಕ್ಕಾರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಕೆ. ಮಂಜುಳಾ, ಉಡುಪಿ ಎಂ.ಜಿ.ಎಂ. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಂಘ ಅಧ್ಯಕ್ಷರಾದ ಶ್ರೀ ಶ್ರೇಯಸ್ ಜಿ. ಕೋಟ್ಯಾನ್ ಮತ್ತು ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಗಂಧಿ ಶೇಖರ್ ಆಗಮಿಸಿಲಿದ್ದಾರೆ.

Udyavara

ಸಂಜೆ ಗಂಟೆ 4.00ಕ್ಕೆ ಜರಗುವ ಸಮಾರೋಪ ಸಮಾರಂಭದಲ್ಲಿ ಖ್ಯಾತ ನೃತ್ಯಜ್ಞೆ, ಹೆಜ್ಜೆಗೆಜ್ಜೆ ಪ್ರತಿಷ್ಠಾನ(ರಿ) ನಿರ್ದೇಶಕಿ ಶ್ರೀಮತಿ ಯಶಾ ರಾಮಕೃಷ್ಣ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಸಹಾಯಕ ಕಮಿಷನರ್ ಶ್ರೀ ರಾಜು ಕೆ. ಕೆ.ಎ.ಎಸ್ ವಹಿಸಲಿದ್ದಾರೆ. ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ| ಸುಕನ್ಯಾ ಮಾರ್ಟಿಸ್, ನ್ಯಾಯವಾದಿಗಳಾದ ಶ್ರೀ ಬಿ. ನಾಗರಾಜ್, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ರಿಯಾಝ್ ಪಳ್ಳಿ ಅತಿಥಿಗಳಾಗಿ ಆಗಮಿಸಲಿದ್ದಾರೆ.

Advertising

ದಿನಪೂರ್ತಿ ಸಂಭ್ರಮದಿಂದ ಜರಗುವ ಈ ಮಕ್ಕಳ ಹಬ್ಬದಲ್ಲಿ ಸಾರ್ವಜನಿಕರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮಾಧ್ಯಮ ಪ್ರಕಟಣೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ತಿಲಕ್‍ರಾಜ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರಿ ಗಿರೀಶ್ ಗುಡ್ಡೆಯಂಗಡಿ, ಕೋಶಾಧಿಕಾರಿಗಳಾದ ಶ್ರೀ ಸೋಮಶೇಖರ್ ಸುರತ್ಕಲ್ ತಿಳಿಸಿದ್ದಾರೆ .

CATEGORIES
Share This

COMMENTS

Wordpress (0)
Disqus ( )