ಹಾರಾಡಿ ಶಾಲೆಯಲ್ಲಿ ಹೇಮಂತದ ಸಂಭ್ರಮ 2019

ಪುತ್ತೂರು : (ನ.30) ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ.ಜಿ.ಪಂ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ದ.ಕ.ಜಿ.ಪಂ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಯ ಹೇಮಂತ ಸಂಭ್ರಮ 2019 ಕಾರ್ಯಕ್ರಮವು ನವಂಬರ್ 30 ರ ಶನಿವಾರ ಶಾಲಾ ವಠಾರದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ಭಾಗವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು.

Primary school haradi

ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ ಜಿ.ಪಂ ಸದಸ್ಯೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ ಯವರು ಮಾತನಾಡಿ ಈ ಶಾಲೆಯ ಕಟ್ಟಡ ದುರವಸ್ಥೆಯ ಬಗ್ಗೆ ಜಿ.ಪಂ‌ ಸಭೆಯಲ್ಲಿ ಪ್ರಸ್ತಾಪ ಮಾಡಿ ಮಳೆ ಹಾನಿ‌ ಅನುದಾನದಲ್ಲಿ ಹೊಸಕಟ್ಟಡಕ್ಕೆ ಅನುದಾನ ನೀಡಲು ಮುಖ್ಯ ಕಾರ್ಯನಿರ್ವಣಾಧಿಕಾರಿಯವರು ಒಪ್ಪಿದ್ದಾರೆ ಎಂದು ಹೇಳಿ ಶುಭಹಾರೈಸಿದರು.

Primary school haradi
ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೊರ್ಕರ್, ಶಾಲಾ ಅಧ್ಯಾಪಕ ವೃಂದ, ಎಸ್.ಡಿ.ಎಂ.ಸಿ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಕೊಡುಗೈ ದಾನಿಗಳು, ವಿದ್ಯಾರ್ಥಿ ಪೋಷಕರು ಹಾಜರಿದ್ದರು.

CATEGORIES
Share This

COMMENTS

Wordpress (0)
Disqus ( )
error: Content is protected !!