ಡಾ| ಯು. ಪಿ. ಶಿವಾನಂದರವರಿಗೆ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

ಬೆಂಗಳೂರು : (ಡಿ.13)  ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿರುವವರಿಗೆ ನೀಡಲಾಗುವ ಪ್ರತಿಷ್ಠಿತ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಒಂದು ಕನ್ನಡ ಪತ್ರಿಕೆಯನ್ನು ಹುಟ್ಟು ಹಾಕಿ ಬೆಳೆಸಿದವರಿಗೆ ನೀಡಲಾಗುವ ವಿಶೇಷ ಗೌರವದ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

U P shivananda

2018ನೇ ದಿನದರ್ಶಿ ವರ್ಷದ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಪುತ್ತೂರಿನ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕ ಡಾ ಯು. ಪಿ. ಶಿವಾನಂದ ಅವರು ಭಾಜನರಾಗಿದ್ದಾರೆ. ತಲಾ ಎರಡು ಲಕ್ಷ ರೂ ನಗದು, ಸ್ಮರಣಿಕೆ ಹಾಗೂ ಫಲ-ತಾಂಬೂಲ ಒಳಗೊಂಡ ಈ ಎರಡೂ ಪ್ರಶಸ್ತಿಗಳಿಗೆ ಕರ್ನಾಟಕ ಉಚ್ಛ ನ್ಯಾಯಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ. ವಿ. ಶೈಲೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಆಯ್ಕೆ ಸಮಿತಿಯನ್ನು ರಚಿಸಿತ್ತು.

Advertising

2017ನೇ ದಿನದರ್ಶಿ ವರ್ಷದ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಯು ಸಂಯುಕ್ತ ಕರ್ನಾಟಕ ಹಾಗೂ ಕರ್ಮವೀರ ಪತ್ರಿಕೆಯ ನಿವೃತ್ತ ಸಂಪಾದಕ ಧೃವರಾಜ್ ವೆಂಕಟರಾವ್ ಮುತಾಲಿಕ್ ದೇಸಾಯಿ ಅವರಿಗೆ ಹಾಗೂ 2018 ನೇ ದಿನದರ್ಶಿ ವರ್ಷದ ಇದೇ ಪ್ರಶಸ್ತಿಯು ಮೈಸೂರಿನ ಕನ್ನಡಿಗರ ಪ್ರಜಾ ನುಡಿ ಪತ್ರಿಕೆಯ ಸಂಪಾದಕ ಡಿ. ಮಹಾದೇವಪ್ಪ ಅವರಿಗೆ ಲಭಿಸಿದೆ.

Advertising

2017 ನೇ ದಿನದರ್ಶಿ ವರ್ಷದ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ತುಮಕೂರು ಪ್ರಾದೇಶಿಕ ಪತ್ರಿಕೆಯ ಸಂಪಾದಕ ಎಸ್. ನಾಗಣ್ಣ ಆಯ್ಕೆಯಾಗಿದ್ದಾರೆ. ಜನವರಿ ಮೊದಲನೇ ವಾರದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

CATEGORIES
Share This

COMMENTS

Wordpress (0)
Disqus ( )
error: Content is protected !!