ಪದವಿ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಮಂಗಳೂರು ವಿಶ್ವವಿದ್ಯಾನಿಲಯ

ಪದವಿ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಮಂಗಳೂರು ವಿಶ್ವವಿದ್ಯಾನಿಲಯ

ಮಂಗಳೂರು :(ಅ.28) ಕರಾವಳಿ ಜಿಲ್ಲೆಗಳಲ್ಲಿ ವಿಪರೀತ ಮಳೆ ಹಾಗೂ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳಿಗೆ ದಿನಾಂಕ 26.10.2019ರಂದು ರಜೆಯನ್ನು ಘೋಷಿಸಲಾದ ಹಿನ್ನೆಲೆಯಲ್ಲಿ, ಅಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ಎಲ್ಲಾ ಪದವಿ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.

Mangalore University Logoಮಾತ್ರವಲ್ಲದೇ ದಿನಾಂಕ 12.11.2019 ರಂದು ಮಂಗಳೂರು ಮಹಾನಗರ ಪಾಲಿಕೆಯ ಚುಣಾವಣೆ ನಡೆಯಲಿರುವುದರಿಂದ ದಿನಾಂಕ 11.11.2019, 12.11.2019 ಗಳಂದು ಎಲ್ಲಾ ಪದವಿ ಹಾಗೂ 13.11.2019ರಂದು ಬಿಬಿಎ/ಬಿಬಿಎಂ ಗೆ ನಿಗದಿಪಡಿಸಲಾಗಿದ್ದ ಪರೀಕ್ಷೆಗಳ ವೇಳಾಪಟ್ಟಿಯನ್ನು ಮರುನಿಗದಿಪಡಿಸಲಾಗಿದೆ.

ಕೋರ್ಸುವಾರು/ವಿಷಯವಾರು ಪರಿಷ್ಖೃತ ಪರೀಕ್ಷಾ ವೇಳಾಪಟ್ಟಿಯನ್ನು ಈಗಾಗಲೇ ಎಲ್ಲಾ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಕಳುಹಿಸಿದ್ದು ವಿದ್ಯಾರ್ಥಿಗಳು ಹಾಗೂ ಭೋಧಕರು ಕಾಲೇಜಿನ ಸೂಚನಾ ಫಲಕದಲ್ಲಿ ಪಡೆದುಕೊಳ್ಳಬಹುದಾಗಿದೆ.

ಈ ಮೇಲಿನ ದಿನಾಂಕಗಳನ್ನು ಹೊರತುಪಡಿಸಿ ಇತರ ಯಾವುದೇ ಪರೀಕ್ಷಾ ದಿನಾಂಕಗಳಲ್ಲಿ ವ್ಯತ್ಯಾಸವಿರುವುದಿಲ್ಲ ಎಂದು ವಿಶ್ವವಿದ್ಯಾನಿಲಯದ ಅಧಿಕೃತ ಅಧಿಸೂಚನೆ ತಿಳಿಸಿದೆ.

Advertising

———

Mangalore University has been re-scheduled the Degree Examination which was postponed on 26.10.2019 due to heavy rain in Udupi district and also due to the City Corporation election to be conducted on 12.11.2019. The rescheduled dates of Mangalore University affects to only the dates scheduled on 26.10.2019, 11.11.2019, 12.11.2019 and 13.11.2019. This will be applicable to all the degree colleges in Dakshina Kannada, Udupi and Kodagu under Mangalore University.

CATEGORIES
TAGS
Share This

COMMENTS

Wordpress (0)
Disqus (0 )
error: Content is protected !!