ಮೋದಿ–ಮಮತಾ ಭೇಟಿ ; ಪಶ್ಚಿಮ ಬಂಗಾಳದಲ್ಲಿ ಪ್ರಧಾನಿಗೆ ಪ್ರತಿಭಟನೆಯ ಸ್ವಾಗತ

ಕೋಲ್ಕತ್ತ : (ಜ.11) ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಗಳನ್ನು ತೀವ್ರವಾಗಿ ವಿರೋಧಿಸುತ್ತ ಬಂದಿರುವ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ನಡುವಿನ ಭೇಟಿ ವಿಚಾರ ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿತ್ತು.

Mamatha meets modi

ಭೇಟಿ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳಕ್ಕೆ ಬಂದಿದ್ದಾರೆ. ಇದು ಕೇವಲ ಸೌಜನ್ಯದ ಭೇಟಿಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗಳನ್ನು  ರಾಜ್ಯದ ಜನರು ಒಪ್ಪಿಕೊಳ್ಳುತ್ತಿಲ್ಲ. ಆ ಕಾರಣ, ನೀವು ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಪುನಃರ್ವಿಮರ್ಶೆ ಮಾಡುವುದು ಒಳಿತು, ಎಂದು ಪ್ರಧಾನಿ ಅವರಿಗೆ ಹೇಳಿರುವುದಾಗಿ ಮಮತಾ ತಿಳಿಸಿದ್ದಾರೆ.

Federal capital

ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಶನಿವಾರ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ. ವಿಮಾನ ನಿಲ್ದಾಣದ ಸುತ್ತ ಬಿಗಿ ಭದ್ರತೆ ಇದ್ದರೂ, ಮೋದಿ ಅವರಿಗೆ ಪ್ರತಿಭಟನೆಯ ಸ್ವಾಗತ ದೊರೆತಿದೆ. ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿಸಿ ತೃಣಮೂಲ ಕಾಂಗ್ರೆಸ್‌ ಮತ್ತು ಎಡ ಪಕ್ಷಗಳ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!