ಆರ್ಥಿಕತೆ ಭೀಕರ ಸ್ಥಿತಿಯಲ್ಲಿದೆ : ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ

ಅಹಮದಾಬಾದ್ : (ಜ.11) ದೇಶದ ಆರ್ಥಿಕತೆ ಭೀಕರವಾಗಿದ್ದು ಹೂಡಿಕೆದಾರರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ “ತೆರಿಗೆ ಭಯೋತ್ಪಾದನೆ” ಕೊನೆಗೊಳಿಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

Subrhamanyan swamy

ಗುಜರಾತ್‌ನ ಇಂಡನ್ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಆರ್ಥಿಕತೆ ಭೀಕರವಾಗಿದೆ. ಎಲ್ಲವೂ ಕೆಳಮುಖವಾಗಿ ಸಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮುಚ್ಚಬೇಕಾಗುತ್ತದೆ ಮತ್ತು ಇದು ವಿಪತ್ತಿಗೆ ಕಾರಣವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Federal capital

ಮೊದಲನೆಯದಾಗಿ ಆದಾಯ ತೆರಿಗೆಯನ್ನು ರದ್ದುಪಡಿಸಬೇಕು. ತೆರಿಗೆ ಭಯೋತ್ಪಾದನೆಯನ್ನು ನಿಯಂತ್ರಿಸಬೇಕು. ಇದರಿಂದ ಜನರು ಹೂಡಿಕೆ ಮಾಡಲು ಆರಂಭಿಸುತ್ತಾರೆ ಎಂದು ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಸದ್ಯ ನಮ್ಮಲ್ಲಿ ಪೂರೈಕೆ ಉತ್ತಮವಾಗಿದ್ದು ಬೇಡಿಕೆಯ ಕೊರತೆ ಎದುರಿಸುತ್ತಿದ್ದೇವೆ. ಆದ್ದರಿಂದ ಬೇಡಿಕೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಸರ್ಕಾರವು ಆರುಪಥ, ಎಂಟುಪಥಗಳ ರಸ್ತೆಗಳನ್ನು ನಿರ್ಮಿಸಬೇಕಿದೆ ಎಂದು ಅವರು ಹೇಳಿದ್ದಾರೆ.

Ashwini studio

ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಡೆದ ಗಲಭೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಸುರಕ್ಷತೆಯ ದೃಷ್ಟಿಯಿಂದ ಪ್ರತಿಯೊಂದು ವಿಶ್ವವಿದ್ಯಾಲಯಗಳಲ್ಲಿಯೂ ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಇರುವಂತೆ ಪೊಲೀಸರನ್ನು ನಿಯೋಜಿಸಬೇಕು. ಜೆಎನ್‌ಯುನಂತಹ ವಿಶ್ವವಿದ್ಯಾಲಯಗಳಲ್ಲಿ ಪೊಲೀಸರು ಮಾತ್ರವಲ್ಲದೆ ಸಿಆರ್‌ಪಿಎಫ್ ಮತ್ತು ಬಿಎಸ್‌ಎಫ್‌ ಕೂಡಾ ಇರಬೇಕು. ಜೆಎನ್‌ಯುವನ್ನು ಎರಡು ವರ್ಷಗಳ ಮಟ್ಟಿಗೆ ಮುಚ್ಚಿ ಅಲ್ಲಿರುವ ಒಳ್ಳೆಯ ವಿದ್ಯಾರ್ಥಿಗಳನ್ನು ಇತರ ವಿಶ್ವವಿದ್ಯಾನಿಲಯಗಳಿಗೆ ಕಳಿಸಬೇಕು ಎಂದು ಹೇಳಿದ್ದಾರೆ

CATEGORIES
TAGS
Share This

COMMENTS

Wordpress (0)
Disqus ( )
error: Content is protected !!